Thursday, March 06, 2008

ಬಾಗಿಲೊಳು ಕೈ ಮುಗಿದು............


2 comments:

ತೇಜಸ್ವಿನಿ ಹೆಗಡೆ said...

ಕಪ್ಪು-ಬಿಳಿಪಿನಾಟ.. ತುಂಬಾ ಸುಂದರವಾಗಿದೆ.."ತೆರೆದಿದೆ ಮೆನೆ ಓ ಬಾ ಅತಿಥಿ.."-ಕುವೆಂಪು ಅವರನ್ನು ನೆನೆಯುವಂತೆ ಮಾಡಿತು!

Sridhar Raju said...

ನಮಸ್ಕಾರ ,

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ‘ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: 16 ಮಾರ್ಚ್ 2008
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ‘ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ‘ಸಂಪದ’ದ ಹರಿಪ್ರಸಾದ್ ನಾಡಿಗ್, ‘ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ‘ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

-ಶ್ರೀಧರ